ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರಾಗಿದೆ:ಆರಗ ಜ್ಞಾನೇಂದ್ರ

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರಾಗಿದೆ:ಆರಗ ಜ್ಞಾನೇಂದ್ರ

ಶಿವಮೊಗ್ಗ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ರಾಜಕೀಯ ಪಕ್ಷಗಳು ದಿನದಿಂದ ದಿನಕ್ಕೆ ಪ್ರಚಾರ ಭರಾಟೆ ಜೋರಾಗಿದೆ.

ನಾನಾ ಸರ್ಕಸ್​ಗಳನ್ನು ಮಾಡುತ್ತಿವೆ. ಈ ನಡುವೆಯೇ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ನಡೆಯುತ್ತಲೇ ಇದೆ.

ಕರ್ನಾಟಕಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರಾಗಿದೆ. 2 ತಿಂಗಳ ಹಿಂದೆ ಎಸಿಎಸ್ ಅಹಮದಾಬಾದ್ ವಿವಿಗೆ ತೆರಳಿದ್ದೆವು. ನೀವು ಅಪೇಕ್ಷೆಪಟ್ಟರೆ ವಿವಿ ಆರಂಭಿಸುವುದಾಗಿ ಎಂದು ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ವಿಶ್ವವಿದ್ಯಾಲಯ ಆರಂಭವಾಗಲಿದೆ.ನವಿಲೆ ಬಳಿ 8 ಎಕರೆ ಜಮೀನು ಡಿಸಿ ಮಂಜೂರು ಮಾಡಿಕೊಟ್ಟಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲೇ ತರಗತಿ ಆರಂಭಿಸಲಾಗುವುದು. ಡಿಪ್ಲೊಮಾ, ಡಿಗ್ರಿಗೆ ಪಿಯುಸಿ ಅರ್ಹತೆ, ಪಿಜಿಗೆ ಡಿಗ್ರಿ ಕ್ವಾಲಿಫಿಕೇಷನ್, ಮಿಲಿಟರಿ, ಆಂತರಿಕ ಭದ್ರತಾ ವಿಭಾಗದ ಕೆಲಸದ ಬಗ್ಗೆ ಬೋಧನೆ ಮಾಡಲಾಗುವುದು. ಮೆರಿಟ್ ಆಧಾರದ ಮೇಲೆ ಇಲ್ಲಿ ಪ್ರವೇಶಾತಿ ಪಡೆಯಲಾಗುವುದು. ಶಿವಮೊಗ್ಗದ ರಾಷ್ಟ್ರೀಯ ರಕ್ಷಾ ವಿವಿ ದೇಶದ ಎರಡನೇ ವಿವಿ ಆಗಿದೆ ಎಂದರು