ಸರ್ಕಾರಿ ಪಿಯು ಕಾಲೇಜುಗಳ ಉಪನ್ಯಾಸಕ'ರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು : ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಿನಾಂಕ:09-01-2023 ರ ಸೋಮವಾರ ಬೆಳಗ್ಗೆ 11-30 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲಾ ಉಪನಿರ್ದೇಶಕರ ಕಚೇರಿಯಲ್ಲಿ ವಿಡಿಯೋ ಕಾನ್ಸರನ್ ಮೂಲಕ ಸ್ಥಳನಿಯುಕ್ತಿ ಕೌನ್ಸೆಲಿಂಗ್ ನಡೆಸಲು ನಿರ್ಧರಿಸಲಾಗಿದೆ.
ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳ ಮಾಹಿತಿಯನ್ನು ಇಲಾಖಾ ಜಾಲತಾಣ ಈ ಲಿಂಕ್‌ನಲ್ಲಿ ಪ್ರಕಟಿಸಲಾಗುವುದು, ಅಭ್ಯರ್ಥಿಗಳು ಸ್ಥಳನಿಯುಕ್ತಿ ಕೌನ್ಸೆಲಿಂಗ್ ಸಮಯದಲ್ಲಿ ಈ ಕೆಳಕಂಡ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ:
- ಅಭ್ಯರ್ಥಿಗಳು ದಿನಾಂಕ: 09-01-2023 ರಂದು ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಒಂದು ಗಂಟೆ ಮುಂಚಿತವಾಗಿ ಹಾಜರಾಗಿ ಜಿಲ್ಲಾ ಉಪನಿರ್ದೇಶಕರಲ್ಲಿ ವರದಿ ಮಾಡಿಕೊಳ್ಳುವುದು.
- ಆಯ್ಕೆಗೊಂಡ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ (ನೈಜತೆ ಪ್ರಮಾಣ ಪತ್ರ ಸ್ವೀಕೃತವಾದ ಅಥವಾ ಸ್ವೀಕೃತವಾಗದೇ ಇರುವ) ಸ್ಥಳ ನಿಯುಕ್ತಿ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗುವುದು.
- ಕರ್ನಾಟಕ ಪರೀಕ್ಷಾ ಪ್ರಾಧಿಕಾರದವರು ಪ್ರಕಟಿಸಲಾದ ಅಂತಿಮ ಆಯ್ಕೆಪಟ್ಟಿಯಂತೆ ಜೇಷ್ಠತೆಯ ಅನುಸಾರ ಕಲ್ಪಿಸಲಾಗುವುದು, ಸವರಿ ಇರುವುದಿಲ್ಲ.