ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಇಂದು ಕಾಂಗ್ರೆಸ್ ಪ್ರತಿಭಟನೆ

ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಇಂದು ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಭ್ರಷ್ಟಾಚಾರದ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡುವಂತೆ ಆಗ್ರಹಿಸಿ ಇಂದು ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವಂತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆಪಿಸಿಸಿ, ದಾವಣಗೆರೆ ಜಿಲ್ಲೆ, ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ದಾಖಲೆ ಸಮೇತ ಲೋಕಾಯುಕ್ತರ ಬಲೆಗೆ ಬಿದ್ದಿದ್ದು ಅವರ ನಿವಾಸದಲ್ಲಿ 8 ಕೋಟಿ ನಗದು ಸಿಕ್ಕಿದೆ, ಬಿಜೆಪಿ ಸರ್ಕಾರದ 40% ಕಮೀಷನ್ ದಂಧೆ ಬಟಾಬಯಲಾಗಿದೆ. ಭ್ರಷ್ಠಾಚಾರ ಆರೋಪದ ಕಾರಣ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡುವಂತೆ ಆಗ್ರಹಿಸಿ ಇಂದು ಬೆಳಿಗ್ಗೆ 09.00 ಗಂಟೆಗೆ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನ ದಿಂದ ಮುಖ್ಯಮಂತ್ರಿ ನಿವಾಸ ಮುತ್ತಿಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಈ ಪ್ರತಿಭಟನೆಯಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿಯವರಾದ ರಣದೀಪ್ ಸಿಂಗ್ ಸುರ್ಜೇವಾಲಾ ರವರು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಪಕ್ಷದ ಹಿರಿಯ ಮುಖಂಡರುಗಳು, ಸಂಸದರು, ಶಾಸಕರುಗಳು, ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದೆ.