ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್‌ ಸರ್ಕಾರ ಅಧಿಕಾರಕ್ಕೆ ಬರುತ್ತದೆ: ಪ್ರತಾಪ್‌ ಸಿಂಹ

ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್‌ ಸರ್ಕಾರ ಅಧಿಕಾರಕ್ಕೆ ಬರುತ್ತದೆ: ಪ್ರತಾಪ್‌ ಸಿಂಹ

ಮೈಸೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಪಕ್ಷಗಳ ಪ್ರಚಾರದ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಾಯಕರ ನಡುವೆ ಆರೋಪ-ಪ್ರತ್ಯಾರೋಪ ನಡೆಯತ್ತಲೇ ಇದೆ.

ಇತ್ತ, ಬಿಜೆಪಿ ಕೇಂದ್ರ ನಾಯಕರು ಆಗಾಗ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ.

ಇನ್ನು ಕಾಂಗ್ರೆಸ್ ಬಸ್ ಯಾತ್ರೆ ಮಾಡುತ್ತಿದೆ. ಕಾಂಗ್ರೆಸ್​ನ ನಾಯಕರು ಶಕ್ತಿ ಪ್ರದರ್ಶನ ತೋರಿಸುತ್ತಿದ್ದಾರೆ. ಈ ನುಡವೆಯೇ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್‌ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆದ್ದರಿಂದ ಬಿಜೆಪಿ ನೇತೃತ್ವದಲ್ಲಿ ರಾಷ್ಟ್ರೀಯವಾದಿ ಸರ್ಕಾರ ತರಲು ಪ್ರಯತ್ನಿಸಲಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಬಿಜೆಪಿ ಪ್ರಮುಖ ನಾಯಕರ ಸಭೆಯಲ್ಲಿ ಪ್ರತಾಪ್‌ ಸಿಂಹ ಮಾತನಾಡಿ, ಮೈಸೂರಿನಲ್ಲಿ ನಡೆದಿದ್ದ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆ ನಡೆದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಮದುವೆ ಇತರೆ ಕಾರ್ಯಕ್ರಮಕ್ಕೆ ಬರ್ತಿದ್ರು. ಆದರೆ ದುಷ್ಕರ್ಮಿಗಳಿಂದ ಹತ್ಯೆಯಾದ ರಾಜುವಿನ ಮನೆಗೆ ಭೇಟಿ ನೀಡಿರಲಿಲ್ಲ. ಕೆಎಫ್‌ ಡಿ, ಪಿಎಫ್‌ ಐನ ೧೭೫ ಸದಸ್ಯರ ಮೇಲಿನ ಕೇಸ್‌ ವಾಪಸ್‌ ಪಡೆದರು. ಇದರಿಂದ ಎರಡು ಡಜನ್‌ ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು. ಈಗ ಮತ್ತೆ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಆಗಲು ಹವಣಿಸುತ್ತಿದ್ದಾರೆ. ನಮ್ಮ ಕಾರ್ಯಕರ್ತರು ಮೈಮರೆತು ತಾಲಿಬಾನ್‌ ಸರ್ಕಾರ ಬರುವ ಸಾಧ್ಯತೆ ಇದೆ ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ.