ಸಿದ್ದೇಶ್ವರ ಶ್ರೀಗಳ ಅಗಲಿಕೆಯಿಂದ ಭಕ್ತಸಮೂಹಕ್ಕೆ ಆಘಾತ; ನಳಿನ್‍ಕುಮಾರ್ ಕಟೀಲ್

ಮಂಗಳೂರು: ವಿಜಯಪುರ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಗಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ.
ವಿಜಯಪುರದ ಜೀವಂತ ದೇವರು ಎಂದೇ ಪ್ರಸಿದ್ಧರಾದವರು.
ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಟಾಂತರಾಗಿದ್ದರು. ಒಬ್ಬ ಜ್ಞಾನಯೋಗಿಗಳ ರೂಪದಲ್ಲಿ ಅವರು ಮುಂದೆಯೂ ನಮ್ಮೊಂದಿಗೆ ಇರುತ್ತಾರೆ ಎಂದರು.