ಸುತ್ತೂರು ಜಾತ್ರೆಗೆ ವಿಶೇಷ ಬಸ್ ವ್ಯವಸ್ಥೆ

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಪ್ರಯುಕ್ತ ಸುತ್ತೂರು ಕ್ಷೇತ್ರಕ್ಕೆ ಅಧಿಕ ಸಂಖ್ಯೆಯಲ್ಲಿ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ಕಾರ್ಯಾಚರಣೆ ಮಾಡಲಾಗುತ್ತದೆ. ಮೈಸೂರು, ತಿ.ನರಸೀಪುರ, ಕೊಳ್ಳೇಗಾಲ, ಹುಣಸೂರು, ಕೆ.ಆರ್.ನಗರ, ಎಚ್.ಡಿ.ಕೋಟೆ, ಗುಂಡ್ಲುಪೇಟೆ, ಚಾಮರಾಜನಗರ, ಪಾಂಡವಪುರ ಕಡೆಯಿಂದ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತದೆ.