ಹುಬ್ಬಳ್ಳಿ: ಗುಜರಾತ್ ರಾಜ್ಯದ ಚುನಾವಣೆಯಲ್ಲಿ ಭಾರತೀಯ ಜನತಾ

ಹುಬ್ಬಳ್ಳಿ: ಗುಜರಾತ್ ರಾಜ್ಯದ ಚುನಾವಣೆಯಲ್ಲಿ ಭಾರತೀಯ ಜನತಾ

ಪಕ್ಷಕ್ಕೆ ಅಭೂತಪೂರ್ವ ಜಯ ಸಿಕ್ಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆ ಕುರಿತು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ರಾಜ್ಯದ ಅಭೂತಪೂರ್ವ ಜಯ ನಿಜಕ್ಕೂ ರಾಜ್ಯದ ಚುನಾವಣೆಗೆ ಬೂಸ್ಟರ್ ಆಗಿ ಪರಿಣಮಿಸುತ್ತದೆ. ಗುಜರಾತ್ ರಾಜ್ಯದ ಜನರು ಭಾರತೀಯ ಜನತಾ ಪಕ್ಷದ ಅಧಿಕಾರದ ಕಾರ್ಯವೈಖರಿ ಹಾಗೂ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಮನ್ನಣೆ ನೀಡಿರುವುದು ನಿಜಕ್ಕೂ ಅಭಿನಂದನಾ ಪೂರಕವಾಗಿದೆ ಎಂದರು.
ಸಿದ್ಧರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಗುಜರಾತ್ ಚುನಾವಣೆ ಫಲಿತಾಂಶ ರಾಜ್ಯದ ಚುನಾವಣೆಗೆ ದಿಕ್ಸೂಚಿ ಆಗದೇ ಇರಬಹುದು ಆದರೆ ಈ ಚುನಾವಣೆ ರಾಜ್ಯದ ಚುನಾವಣೆಗೆ ದೊಡ್ಡಮಟ್ಟದ ಪರಿಣಾಮದ ಮೂಲಕ ಬೂಸ್ಟರ್ ಆಗಿ ಪರಿಣಮಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುವ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ ಎಂದು ಅವರು ಹೇಳಿದರು.