ಹೈದರಾಬಾದ್‌ನಲ್ಲಿ ನಾಯಿ ಕಡಿತದಿಂದ ಪ್ರತಿದಿನ 100 ಮಂದಿ ಆಸ್ಪತ್ರೆಗೆ ದಾಖಲು

ಹೈದರಾಬಾದ್‌ನಲ್ಲಿ ನಾಯಿ ಕಡಿತದಿಂದ ಪ್ರತಿದಿನ 100 ಮಂದಿ ಆಸ್ಪತ್ರೆಗೆ ದಾಖಲು

ಹೈದರಾಬಾದ್ (ತೆಲಂಗಾಣ): ಹೈದರಾಬಾದ್‌ನಲ್ಲಿ ಹೆಚ್ಚಾಗಿ ನಾಯಿ ಕಡಿತ ಪ್ರಕರಣಗಳು ವರದಿಯಾಗುತ್ತಿದ್ದು, ದಿನಕ್ಕೆ ಸುಮಾರು 100 ಮಂದಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂದು ಇಲ್ಲಿನ ಸರ್ಕಾರಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಇಲ್ಲಿ ಸರ್ಕಾರಿ ಜ್ವರ ಆಸ್ಪತ್ರೆಯ ವೈದ್ಯಕೀಯ ಪ್ರಾಧ್ಯಾಪಕ ಡಾ.ಕೊಂಡಲ್ ರೆಡ್ಡಿ ಮಾತನಾಡಿ, ಇತ್ತೀಚೆಗೆ ನಗರದಲ್ಲಿ ನಾಯಿ ಕಡಿತದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆಸ್ಪತ್ರೆಯಲ್ಲಿ ಪ್ರತಿದಿನ ಸುಮಾರು 90 ರಿಂದ 110 ಮಂದಿ ದಾಖಲಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ನಾಯಿ ಕಡಿತವನ್ನು ತಡೆಗಟ್ಟುವುದು ಬಹಳ ಮುಖ್ಯವಾಗಿದೆ. ಏಕೆಂದರೆ, ರೇಬೀಸ್‌ಗೆ ಯಾವುದೇ ಸೂಕ್ತ ಚಿಕಿತ್ಸೆ ಇಲ್ಲ. ಇದರಿಂದ ಸಾವುಗಳು ಸಂಭವಿಸಬಹುದು. ನಾಯಿ ಕಡಿತದಿಂದ ಪಾರಾಗಲು ಸೂಕ್ತ ಕ್ರಮಗಳನ್ನು ಅನುಸರಿಸಬೇಕು. ಜನರು ಸಹ ಬೀದಿ ನಾಯಿಗಳಿಂದ ದೂರ ಇರಬೇಕೆಂದು ಅವರು ಹೇಳಿದರು.

ಇತ್ತೀಚೆಗೆ, ಹೈದರಾಬಾದ್‌ನ ಅಂಬರ್‌ಪೇಟ್‌ನಲ್ಲಿ ಬೀದಿ ನಾಯಿಗಳ ದಾಳಿಯಿಂದ ಪುಟ್ಟ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿತ್ತು